ದಸರಾ ಹಬ್ಬದ ರಜೆ ನೀಡದೆ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆಯೂ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಅಕ್ಟೋಬರ್ 28ರವರೆಗೆ ಪರೀಕ್ಷೆಗಳನ್ನು ಆಯೋಜಿಸಲಾಗಿದ್ದು, ದಸರಾ ರಜೆ ನೀಡದೆ ಆಡಳಿತ ಮಂಡಳಿ ಉದ್ದಟತನ ಪ್ರದರ್ಶಿಸಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಬ್ಬದ ಆಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಬೆಂಬಲದೊಂದಿಗೆ ನೂರಾರು ವಿದ್ಯಾರ್ಥಿಗಳು ಧರಣಿ ಕುಳಿತಿದ್ದಾರೆ. ಪರೀಕ್ಷೆಗಳನ್ನು ತಕ್ಷಣವೇ ಮುಂದೂಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ನೀಡಲಾಗಿದ್ದು, ಪ್ರತಿಭಟನೆ ಮುಂದುವರಿದಿದೆ.







Comments