ದಾವಣಗೆರೆ: ಜಿಮ್ ಮುಗಿಸಿ ಬಂದಿದ್ದ ರಾಷ್ಟ್ರೀಯ ಬಾಡಿ ಬಿಲ್ಡರ್ ಹೃದಯಾಘಾತದಿಂದ ನಿಧನ

ದಾವಣಗೆರೆಯ ಕೆಟಿಜೆ ನಗರದ ನಿವಾಸಿ, 26 ವರ್ಷದ ರಾಷ್ಟ್ರೀಯ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ದುರಂತವಾಗಿ ಸಾವನ್ನಪ್ಪಿದ್ದಾರೆ.
ರಾತ್ರಿ ತಲೆಸುತ್ತು ಬರುತ್ತಿದೆ ಎಂದು ಹೇಳಿ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಲೋ ಬಿಪಿಯಿಂದಾಗಿ ಹೃದಯಾಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ವಿಜೇತರಾಗಿದ್ದ ಸುಶೀಲ್, ಅಂತರರಾಷ್ಟ್ರೀಯ ಸ್ಪರ್ಧೆಗೆ ಸಿದ್ಧರಾಗುತ್ತಿದ್ದರು. ನಿತ್ಯ ಹತ್ತಾರು ಯುವಕರಿಗೆ ಉಚಿತ ತರಬೇತಿ ನೀಡುತ್ತಿದ್ದ ಅವರ ಸಾವು ಕುಟುಂಬಸ್ಥರು ಹಾಗೂ ಕ್ರೀಡಾಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ.







Comments