ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ದ.ಕ ಡಿಸಿ ಸೂಚನೆ
- Jun 11
- 1 min read

ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಲಾಗಿರುವ ಎಲ್ಲಾ ಅನಧಿಕೃತ ಹಾಗೂ ಅಪಾಯಕಾರಿ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದೆ. ಗಾಳಿ-ಮಳೆಗೆ ಈ ಬ್ಯಾನರ್‌ಗಳು ಕಳಚಿ ವಾಹನ ಸವಾರರು ಹಾಗೂ ಪಾದಚಾರಿಗಳ ಮೇಲೆ ಬಿದ್ದು ಅಪಘಾತಗಳು ಮತ್ತು ಜೀವಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಡಿವೈಡರ್ ಮೇಲಿನ ಬೋರ್ಡ್‌ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ದೂರುಗಳು ಬಂದಿದ್ದವು. ಸ್ಥಳೀಯ ಸಂಸ್ಥೆಗಳು ಇವುಗಳನ್ನು ತಕ್ಷಣ ತೆರವುಗೊಳಿಸದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.







Comments