ಪುತ್ತೂರು : ಕ್ರೀಡಾಕೂಟದ ವೇಳೆ ಹೃದಯಾಘಾತ – ರವಿ ಕುಮಾರ್ ಕಲ್ಕಾರ್ ನಿಧನ
ಪುತ್ತೂರು: ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಪುತ್ತೂರಿನ ಶಾಂತಿಗೋಡಿನಲ್ಲಿ ನಡೆದಿದೆ. ಮೃತರನ್ನು 48 ವರ್ಷದ ರವಿ ಕುಮಾರ್ ಕಲ್ಕಾರ್ ಎಂದು ಗುರುತಿಸಲಾಗಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ ರವಿ ಅಕಸ್ಮಾತ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದು ಬಂದಿದೆ.
ರವಿ ಕಲ್ಕಾರ್ ಹಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ನಿರ್ವಹಿಸಿ ಬಳಿಕ ಸ್ವಗ್ರಾಮ ಶಾಂತಿಗೋಡು ಕಲ್ಕಾರ್ ಪ್ರದೇಶದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಸಾಮಾಜಿಕ ಹಾಗೂ ಸಂಘಟನೆ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ವಿಭಾಗದ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.







Comments