ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಖ್ಯಾತ ನಟ, ‘ಹಿಟ್ಲರ್ ಕಲ್ಯಾಣ’ ಖ್ಯಾತಿಯ ದಿಲೀಪ್ ರಾಜ್ ನಿಧನ

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (47) ಇಂದು ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ದಿಲೀಪ್ ರಾಜ್ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಸಕ್ರಿಯರಾಗಿದ್ದರು. 'ಹಿಟ್ಲರ್ ಕಲ್ಯಾಣ' ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಅವರು, ಪುನೀತ್ ರಾಜ್‌ಕುಮಾರ್ ಅಭಿನಯದ ‘ಮಿಲನ’ ಚಿತ್ರದಲ್ಲಿನ ಖಳನಾಯಕನ ಪಾತ್ರದಿಂದ ಪ್ರಸಿದ್ಧಿ ಪಡೆದಿದ್ದರು. ಇತ್ತೀಚೆಗೆ ಬಿಡುಗಡೆಯಾದ 'ಲವ್ ಮಾಕ್ಟೇಲ್ 3' ಇವರ ಕೊನೆಯ ಸಿನಿಮಾವಾಗಿದೆ.
ನಟನೆಯ ಜೊತೆಗೆ ಅವರು ನಿರ್ಮಾಪಕರಾಗಿಯೂ ಯಶಸ್ವಿಯಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 47ನೇ ವಯಸ್ಸಿನಲ್ಲಿ ಫಿಟ್ ಆಗಿದ್ದ ನಟನ ಸಾವಿನ ಸುದ್ದಿ ಅಭಿಮಾನಿಗಳಿಗೆ ಅತೀವ ಆಘಾತ ತಂದಿದೆ.







Comments