ದೆಹಲಿ ಶಾಲೆಗಳಲ್ಲಿ 'ವಾಟರ್ ಬೆಲ್' ಜಾರಿ: ಹೀಟ್‌ವೇವ್ ಹಿನ್ನೆಲೆ ಹೊಸ ಮಾರ್ಗಸೂಚಿ

ದೆಹಲಿಯಲ್ಲಿ ಸುಡುತ್ತಿರುವ ಬಿಸಿಲಿನ ತಾಪ ಮತ್ತು ಹೀಟ್‌ವೇವ್ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಇನ್ಮುಂದೆ ಪ್ರತಿ ಗಂಟೆಗೊಮ್ಮೆ 'ವಾಟರ್ ಬೆಲ್' ಬಾರಿಸಲಾಗುತ್ತದೆ. ಆ ಸಮಯದಲ್ಲಿ ಮಕ್ಕಳು ಕಡ್ಡಾಯವಾಗಿ ನೀರು ಕುಡಿಯಬೇಕು. ಅಲ್ಲದೆ, ಬಿಸಿಲಿನ ಬೇಗೆ ತಪ್ಪಿಸಲು ಹೊರಾಂಗಣದಲ್ಲಿ ನಡೆಸಲಾಗುತ್ತಿದ್ದ ಸಾಮೂಹಿಕ ಪ್ರಾರ್ಥನೆಯನ್ನು ರದ್ದುಗೊಳಿಸಲಾಗಿದ್ದು, ನೆರಳಿರುವ ಪ್ರದೇಶ ಅಥವಾ ಒಳಾಂಗಣದಲ್ಲಿ ನಡೆಸಲು ಸೂಚಿಸಲಾಗಿದೆ.

ಹೆಚ್ಚುತ್ತಿರುವ ಉಷ್ಣಾಂಶದಿಂದ ಮಕ್ಕಳನ್ನು ರಕ್ಷಿಸಲು ಪೋಷಕರಿಗೂ ಸಲಹೆ ನೀಡಲಾಗಿದೆ. ಮಕ್ಕಳಿಗೆ ಹಗುರವಾದ ಮತ್ತು ಗಾಳಿಯಾಡುವ ಹತ್ತಿ ಬಟ್ಟೆಗಳನ್ನು ಧರಿಸಿ ಶಾಲೆಗೆ ಕಳುಹಿಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶಾಲಾ ಆವರಣದಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡುವಂತೆ ಮತ್ತು ಮಕ್ಕಳು ನೇರ ಬಿಸಿಲಿಗೆ ಒಡ್ಡಿಕೊಳ್ಳದಂತೆ ಜಾಗೃತಿ ವಹಿಸಲು ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಿರ್ಜಲೀಕರಣದಂತಹ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯವಾಗಲಿದೆ.







Comments