;
top of page

ದೆಹಲಿಯಲ್ಲಿ ಹೈಡ್ರಾಮಾ: ಪ್ರತಿಭಟನಾ ನಿರತ ಅಭಿಜೀತ್ ದೀಪ್ಕೆ ಮೇಲೆ ನೀಲಿ ಇಂಕ್‌ ದಾಳಿ!

  • 11 minutes ago
  • 1 min read

ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ, ದೆಹಲಿಯ ಜಂತರ್ ಮಂತರ್‌ನಲ್ಲಿ ಮತ್ತೊಂದು ಹೈಡ್ರಾಮಾ ನಡೆದಿದೆ. ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಮಹಿಳೆಯೊಬ್ಬರು ನೀಲಿ ಇಂಕ್ ಎರಚಿದ್ದಾರೆ.

ಶನಿವಾರ ಪ್ರತಿಭಟನಾ ಸ್ಥಳದಲ್ಲಿ ದೀಪ್ಕೆ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಏಕಾಏಕಿ ನುಗ್ಗಿದ ಮಹಿಳೆ ಇಂಕ್ ಎರಚಿದ ತಕ್ಷಣವೇ ಬೆಂಬಲಿಗರು ಆಕೆಯನ್ನು ತಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಯ ನಂತರ ದೀಪ್ಕೆ ಅವರು ತಮ್ಮ 'X' ಖಾತೆಯಲ್ಲಿ ವಿಡಿಯೋ ಹಂಚಿಕೊಂಡು, "ನೀಲಿ ನನ್ನ ಬಣ್ಣ… ಜೈ ಭೀಮ್" ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ ಇಂಕ್ ಎರಚಿದ ಮಹಿಳೆ ಯಾರು ಮತ್ತು ಆಕೆಯ ಉದ್ದೇಶವೇನು ಎಂಬುದು ಇನ್ನು ಸ್ಪಷ್ಟವಾಗಿಲ್ಲ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page