
ದೇವರಕೊಲ್ಲಿ ಬಳಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ; ಹಲವರಿಗೆ ಗಂಭೀರ ಗಾಯ

ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್ಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಅಪಘಾತದ ಬಳಿಕ ಟಿಟಿ ವಾಹನದೊಳಗೆ ಕೆಲವರು ಸಿಲುಕಿಕೊಂಡಿದ್ದರು. ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಗಾಯಾಳುಗಳನ್ನು ಮೂರು ಅಂಬ್ಯುಲೆನ್ಸ್‌ಗಳ ಮೂಲಕ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆಯಲ್ಲಿ ಸಾವು ಸಂಭವಿಸಿರುವ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.







Comments