ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ಪ್ರಕಾಶ್ ರಾಜ್

ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ನಟ ಪ್ರಕಾಶ್ ರಾಜ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ನನ್ನ ಬಗ್ಗೆ ಹರಡುತ್ತಿರುವುದೆಲ್ಲವೂ ಸಂಪೂರ್ಣ ಸುಳ್ಳು ಸುದ್ದಿ ಎಂದು ಅವರು ಕಿಡಿಕಾರಿದ್ದಾರೆ.
ಇದು ಕೋಟ್ಯಂತರ ಭಕ್ತರ ನಂಬಿಕೆಯ ಸೂಕ್ಷ್ಮ ವಿಷಯವಾಗಿದೆ. ನಾನು ಸದ್ಯ ಊರಿನಲ್ಲಿಲ್ಲ, ಇನ್ನೆರಡು ದಿನಗಳಲ್ಲಿ ಖುದ್ದಾಗಿ ಬಂದು ಮಾಧ್ಯಮಗಳ ಮುಂದೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಯಾರೂ ಗಾಳಿ ಸುದ್ದಿ ನಂಬಬೇಡಿ ಎಂದು ವಿನಂತಿಸಿದ್ದಾರೆ.
ಪ್ರಕರಣದ ಆರೋಪಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಷಡ್ಯಂತ್ರದ ಹಿಂದೆ ಪ್ರಕಾಶ್ ರಾಜ್, ತಿಮರೋಡಿ ಸೇರಿದಂತೆ ಹಲವರಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಬೆನ್ನಲ್ಲೇ ಈ ಪ್ರತಿಕ್ರಿಯೆ ಬಂದಿದೆ.







Comments