;
top of page

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರುತನಿಖೆ ಚುರುಕುಗೊಳಿಸಿದ ಎಸ್‌ಐಟಿ, 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ನೋಟಿಸ್!

3 days ago
1 min read

ಧರ್ಮಸ್ಥಳದಲ್ಲಿ ಸಂಭವಿಸಿದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭಿಕ ತನಿಖೆಯಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಎಸ್‌ಐಟಿ ಸದ್ಯ ನೋಟಿಸ್ ನೀಡಿದೆ.

2012ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿತ್ತು. ಈ ಹಿಂದೆ ನಡೆದಿರುವ ಆರಂಭಿಕ ಪೊಲೀಸ್ ತನಿಖೆಯಿಂದ ಹಿಡಿದು, ನಂತರದ ಸಿಐಡಿ ಹಾಗೂ ಸಿಬಿಐ ತನಿಖೆಯ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ ಸೆಕ್ಷನ್ 160 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ನೋಟಿಸ್ ಪಡೆದವರ ಪಟ್ಟಿಯಲ್ಲಿ ಬೆಳ್ತಂಗಡಿ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಭಾಸ್ಕರ್ ರೈ, ಪಿಎಸ್‌ಐ ಯೋಗೀಶ್ ಹಾಗೂ ಸಿಐಡಿ ಡಿವೈಎಸ್ಪಿ ರುದ್ರಮುನಿ ಸೇರಿದ್ದಾರೆ. ಇದರೊಂದಿಗೆ ಎಎಸ್‌ಐ ಕಲೈಮಾರ್, ಮಹಿಳಾ ಹೆಡ್ ಕಾನ್ಸ್ಟೇಬಲ್ ಸವಿತಾ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಕೃಷ್ಣ, ರಿಷಬ್, ನವೀನ್ ಹಾಗೂ ಭಾಸ್ಕರ್ ಅವರಿಗೂ ನೋಟಿಸ್ ರವಾನೆಯಾಗಿದೆ.

ಮುಂದಿನ ದಿನಗಳಲ್ಲಿ ತನಿಖೆಯಲ್ಲಿ ಭಾಗಿಯಾಗಿದ್ದ ಇತರ ಸಿಐಡಿ ಮತ್ತು ಸಿಬಿಐ ಅಧಿಕಾರಿಗಳಿಗೂ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page