;
top of page

ಇಂಧನ ದರ ಏರಿಕೆ ಶಾಕ್: ದೆಹಲಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ!

  • May 25
  • 1 min read

ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮತ್ತೆ ಇಂಧನ ದರ ಏರಿಕೆಯ ಶಾಕ್ ನೀಡಿದೆ. ಕಳೆದ 11 ದಿನಗಳಲ್ಲಿ ಇದು ನಾಲ್ಕನೇ ಬಾರಿ ಬೆಲೆ ಹೆಚ್ಚಳವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ಲೀಟರ್‌ಗೆ 2.61 ರೂ. ಹಾಗೂ 2.71 ರೂ. ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಮೇ 15ರಿಂದ ತೈಲ ದರ ಪರಿಷ್ಕರಣೆ ಆರಂಭವಾದ ಬಳಿಕ ಒಟ್ಟು 7.5 ರೂ. ಹೆಚ್ಚಳವಾಗಿದ್ದು, ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಸದ್ಯ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.12 ರೂ. ಹಾಗೂ ಡೀಸೆಲ್ ದರ 95.20 ರೂ. ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ ಹಾಗೂ ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ತೈಲ ಕಂಪನಿಗಳ ಆಮದು ವೆಚ್ಚ ಹೆಚ್ಚಾಗಿದೆ. ಕಂಪನಿಗಳ ನಷ್ಟ ಸರಿದೂಗಿಸಲು ಈ ದರ ಏರಿಕೆ ಅನಿವಾರ್ಯವಾಗಿದೆ ಎಂದು ತೈಲ ಅಧಿಕಾರಿಗಳು ತಿಳಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page