ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡುಗೆ ಅನಿಲ ಪೂರೈಕೆ ಬಗ್ಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಗಾಬರಿಗೊಂಡು ಅನಗತ್ಯವಾಗಿ ಸಿಲಿಂಡರ್ ಬುಕ್ ಮಾಡುವ ಅಗತ್ಯವಿಲ್ಲ. 25 ದಿನಗಳ ನಿಯಮದಂತೆ ಪೂರೈಕೆ ಸುಗಮವಾಗಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬಾಟ್ಲಿಂಗ್ ಘಟಕಗಳು ಹಾಗೂ ದಾಸ್ತಾನು ಕೇಂದ್ರಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಎಂಆರ್‌ಪಿಎಲ್ ಮತ್ತು ತೈಲ ಕಂಪನಿಗಳೊಂದಿಗೆ ಸಭೆ ನಡೆಸಲಾಗಿದ್ದು, ಉತ್ಪಾದನೆ ಮತ್ತು ಆಮದಿನಲ್ಲಿ ಕುಸಿತ ಕಂಡುಬಂದಿಲ್ಲ. ಸಾರ್ವಜನಿಕ ಸಂಸ್ಥೆಗಳು, ಹಾಸ್ಟೆಲ್‌ಗಳು ಹಾಗೂ ಧಾರ್ಮಿಕ ಕೇಂದ್ರಗಳ ಅನ್ನದಾಸೋಹಕ್ಕೆ ಅನಿಲ ಪೂರೈಕೆ ಮುಂದುವರಿಯಲಿದೆ.
ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿ ಬರುವವರೆಗೆ ತಾತ್ಕಾಲಿಕವಾಗಿ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಸರ್ಕಾರ ಕ್ರಮ ವಹಿಸುತ್ತಿದೆ. ರೈಲ್ವೆ ನಿಲ್ದಾಣಗಳ ಬೇಡಿಕೆಯ ಬಗ್ಗೆಯೂ ಜಿಲ್ಲಾಡಳಿತ ಗಮನ ಹರಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.







Comments