ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ
- Mar 11
- 1 min read

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಅನಿವಾರ್ಯ ಕೆಲಸಗಳ ಹೊರತಾಗಿ ಮಧ್ಯಾಹ್ನದ ಸಮಯದಲ್ಲಿ ಹೊರಗೆ ಓಡಾಡುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ವಾಹನಗಳನ್ನು ಉರಿ ಬಿಸಿಲಿನಲ್ಲಿ ನಿಲ್ಲಿಸಿದಾಗ ಅದರೊಳಗೆ ಮಕ್ಕಳು ಅಥವಾ ವೃದ್ಧರು ಇರದಂತೆ ವಿಶೇಷ ನಿಗಾ ವಹಿಸುವುದು ಅತ್ಯಗತ್ಯವಾಗಿದೆ.

ಬಿಸಿಲಿನ ಬೇಗೆಯಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ನೀರು ಹಾಗೂ ತಾಜಾ ಹಣ್ಣಿನ ರಸಗಳನ್ನು ಸೇವಿಸಬೇಕು. ನಿರ್ಜಲೀಕರಣ ತಪ್ಪಿಸಲು ನೀರಿನ ಅಂಶ ಹೆಚ್ಚಿರುವ ಆಹಾರ ಪದಾರ್ಥಗಳಿಗೆ ಆದ್ಯತೆ ನೀಡುವುದು ಉತ್ತಮ ಎಂದು ವೈದ್ಯಕೀಯ ಇಲಾಖೆ ಸಲಹೆ ನೀಡಿದೆ. ಬಿಸಿಲಿನ ತಾಪದಿಂದ ಉಂಟಾಗುವ ಆಯಾಸ ಅಥವಾ ಸುಸ್ತು ಕಂಡುಬಂದಲ್ಲಿ ತಕ್ಷಣವೇ ವಿಶ್ರಾಂತಿ ಪಡೆದು ವೈದ್ಯಕೀಯ ನೆರವು ಪಡೆಯಬೇಕು. ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೋರಲಾಗಿದೆ.







Comments