ಮುಖ್ಯಮಂತ್ರಿ ಕುರ್ಚಿಗೇರಿದ ಬೆನ್ನಲ್ಲೇ ಆ್ಯಕ್ಷನ್ -ಪ್ರತಿ ತಾಲೂಕಿನಲ್ಲೂ ವಿಶೇಷ ಪೊಲೀಸ್ ಸ್ಕ್ವಾಡ್ ರಚನೆಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ ಹೆಚ್ಚುತ್ತಿರುವ ರೌಡಿಸಂ, ಡ್ರಗ್ಸ್ ದಂಧೆ, ಜೂಜಾಟ ಹಾಗೂ ಮಟ್ಕಾ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್‌ಗಳನ್ನು ರಚಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಿಎಂ, ಪ್ರತಿ ತಂಡದಲ್ಲಿ 10 ರಿಂದ 15 ಪೊಲೀಸ್ ಸಿಬ್ಬಂದಿ ಇರಲಿದ್ದಾರೆ ಎಂದು ತಿಳಿಸಿದರು. ಈ ವಿಶೇಷ ಸ್ಕ್ವಾಡ್‌ಗಳು ಸ್ಥಳೀಯ ಮಟ್ಟದಲ್ಲಿ ರೌಡಿಶೀಟರ್‌ಗಳ ಮೇಲೆ ನಿರಂತರ ನಿಗಾ ಇಡಲಿವೆ. ಜೊತೆಗೆ, ಅಪರಾಧ ಜಗತ್ತಿನತ್ತ ಆಕರ್ಷಿತರಾಗುತ್ತಿರುವ ಯುವಕರನ್ನು ಗುರುತಿಸಿ ಅವರಿಗೆ ಕೌನ್ಸಿಲಿಂಗ್ ನಡೆಸಿ ಸರಿದಾರಿಗೆ ತರುವ ಜವಾಬ್ದಾರಿಯನ್ನು ಈ ತಂಡಗಳು ಹೊರಲಿವೆ.
ವಿಶೇಷವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಡ್ರಗ್ಸ್, ಗಾಂಜಾ, ಸುಲಿಗೆ ಹಾಗೂ ಅಕ್ರಮ ದಂಧೆಗಳು ಹೆಚ್ಚುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಿಎಂ, ಇಂತಹ ಕಾನೂನುಬಾಹಿರ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ಅಪರಾಧ ಮುಕ್ತ ರಾಜ್ಯ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.







Comments