;
top of page

ದ್ವೇಷ ಭಾಷಣ ತಡೆ ವಿಧೇಯಕ: ರಾಜ್ಯಪಾಲರಿಂದ ರಾಷ್ಟ್ರಪತಿಗಳ ಪರಿಶೀಲನೆಗೆ ರವಾನೆ

  • Writer: sathyapathanewsplu
    sathyapathanewsplu
  • 2 hours ago
  • 1 min read

ಬೆಂಗಳೂರು: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಗದ್ದಲದ ನಡುವೆ ಅಂಗೀಕಾರವಾಗಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕ’ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಲು ನಿರಾಕರಿಸಿದ್ದಾರೆ. ಬದಲಿಗೆ, ಈ ವಿಧೇಯಕವನ್ನು ರಾಷ್ಟ್ರಪತಿಗಳ ಪರಿಶೀಲನೆಗೆ ರವಾನಿಸುವ ಮೂಲಕ ಸರ್ಕಾರಕ್ಕೆ ಹಿನ್ನಡೆ ನೀಡಿದ್ದಾರೆ.

ಈ ವಿಧೇಯಕದಲ್ಲಿ ದ್ವೇಷ ಭಾಷಣದ ವ್ಯಾಖ್ಯಾನ ಅಸ್ಪಷ್ಟವಾಗಿದೆ ಮತ್ತು ಇದರಿಂದ ಧರ್ಮ ಅಥವಾ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತ ಕ್ರಮಗಳು ಜರುಗುವ ಸಾಧ್ಯತೆಯಿದೆ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಟ್ಟು 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿರುವ ಅವರು, ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸದೆ ವಿಧೇಯಕ ಅಂಗೀಕರಿಸಿರುವುದನ್ನು ಪ್ರಶ್ನಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ವಿಧೇಯಕವು ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page