ದಕ್ಷಿಣ ಕನ್ನಡ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಲು ದಿನೇಶ್ ಗುಂಡೂರಾವ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಾರಿಯಲ್ಲಿರುವ ಐದು ಪ್ರಮುಖ ಯೋಜನೆಗಳು ಪೂರ್ಣಗೊಂಡರೆ ಗ್ರಾಮೀಣ ಭಾಗದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿಗಳಿಗೆ ಅಡ್ಡಿಯಾಗಿರುವ ಅರಣ್ಯ ಇಲಾಖೆಯ ಭೂಮಿ ಸಂಬಂಧಿತ ಸಮಸ್ಯೆಗಳನ್ನು ಸಮನ್ವಯದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅವರು ನಿರ್ದೇಶನ ನೀಡಿದರು.

ಮಂಗಳೂರು ನಗರದ ನೀರಿನ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ತುಂಬೆ ಅಣೆಕಟ್ಟಿನಲ್ಲಿ ಸದ್ಯ 5.5 ಮೀಟರ್ ನೀರು ಲಭ್ಯವಿದ್ದು, ಪೂರೈಕೆ ವ್ಯವಸ್ಥೆ ಉತ್ತಮವಾಗಿದೆ ಎಂದರು. ಎತ್ತರದ ಪ್ರದೇಶಗಳಲ್ಲಿ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅವರು ಸಭೆಗೆ ವಿವರಿಸಿದರು.







Comments