;
top of page

ಇರಾನ್-ಇಸ್ರೇಲ್ ಯುದ್ಧ ತೀವ್ರ: 700ಕ್ಕೂ ಅಧಿಕ ಸಾವು, 'ಆಪರೇಷನ್ ಎಪಿಕ್ ಪ್ಯೂರಿ' ಆರಂಭ

  • Mar 3
  • 1 min read

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದಿದ್ದು, ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ 176 ಮಕ್ಕಳು ಸೇರಿದಂತೆ 700ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ಆಪರೇಷನ್ ಎಪಿಕ್ ಪ್ಯೂರಿ' ಘೋಷಿಸಿದ್ದು, ಇರಾನ್‌ನ 131 ನಗರಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.

ಇರಾನ್‌ನ ಅಣ್ವಸ್ತ್ರ ನೆಲೆಗಳು ಮತ್ತು ಕ್ಷಿಪಣಿ ವ್ಯವಸ್ಥೆಗಳೇ ಗುರಿಯಾಗಿದ್ದು, ದಾಳಿಯಲ್ಲಿ 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಎಚ್ಚರಿಸಿದೆ. ಪ್ರತಿಯಾಗಿ ಇಸ್ರೇಲ್ ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕವಿದ್ದು, ಎರಡೂ ದೇಶಗಳಲ್ಲಿ ಅಪಾರ ಸಾವು-ನೋವು ಸಂಭವಿಸಿದೆ. ಇಡೀ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಅಂತರಾಷ್ಟ್ರೀಯ ಸಮುದಾಯದ ಮಧ್ಯಸ್ಥಿಕೆಯ ನಿರೀಕ್ಷೆಯಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page