ಫೇಲ್ ಆದ ಮಕ್ಕಳಿಗೆ 3ನೇ ಬಾರಿ ಪರೀಕ್ಷೆಯ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

SSLC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 18 ರಿಂದ 25 ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ. ಸುಮಾರು 1000ಕ್ಕೂ ಹೆಚ್ಚು ಮಕ್ಕಳು ಈ ಅವಕಾಶವನ್ನು ಬಳಸಿಕೊಂಡು ತೇರ್ಗಡೆಯಾಗಲು ಉತ್ತಮ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷ ಮೂರನೇ ಬಾರಿ ಪರೀಕ್ಷೆ ನಡೆಸುವ ಸಂದರ್ಭ ಬರುವುದಿಲ್ಲ ಹಾಗೂ ಅಂತಹ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಫೇಲ್ ಆದ ವಿದ್ಯಾರ್ಥಿಗಳು ಧೃತಿಗೆಡದೆ ಲಭ್ಯವಿರುವ ಎರಡನೇ ಪರೀಕ್ಷೆಯಲ್ಲೇ ಜಯಶಾಲಿಯಾಗಬೇಕೆಂದು ಅವರು ಕರೆ ನೀಡಿದ್ದಾರೆ. ಪರೀಕ್ಷಾ ಮಂಡಳಿಯು ಈಗಾಗಲೇ ಎರಡನೇ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.







Comments