ಮೃತಪಟ್ಟಿದ್ದಾರೆಂದು ಸುಳ್ಳು ಪ್ರಮಾಣ ಪತ್ರ ಸೃಷ್ಟಿ: ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ಜೀವಂತವಾಗಿರುವ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಸುಳ್ಳು ಮರಣ ಪ್ರಮಾಣ ಪತ್ರ ಸೃಷ್ಟಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಯತ್ನಿಸಿದ ಗಂಭೀರ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ಬಾಗವಾನ್ ಕಾಲೋನಿಯ ಅಬ್ದುಲ್ ರಝಾಕ್ ನೀಡಿದ ದೂರಿನ ಮೇರೆಗೆ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ಹೂಡಲಾಗಿದೆ.
ಶಾಸಕ ಯತ್ನಾಳ್ ಹಾಗೂ ಅವರ ಬೆಂಬಲಿಗರು ಸೆಪ್ಟೆಂಬರ್ 3 ರಂದು ನಕಲಿ ಮರಣ ಪ್ರಮಾಣ ಪತ್ರಗಳನ್ನು ನಗರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಂತೆ ಕೋರಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಜಲನಗರ ಪೊಲೀಸ್ ಠಾಣೆಯ ಅಧಿಕಾರಿಗಳು ದೂರಿನ ಅನ್ವಯ ತನಿಖೆ ಕೈಗೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.







Comments