;
top of page

ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರಿನಲ್ಲಿ ಬಂಧನ

Oct 8
1 min read

ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿ, ಶಿಕ್ಷೆಯಾದ ಬಳಿಕ ತಲೆಮರೆಸಿಕೊಂಡಿದ್ದ ಕೇರಳದ ಕಾಸರಗೋಡಿನ ಬೇವಿಂಜೆ ನಿವಾಸಿ ವೇಲಾಯುಧನ್ (54) ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ತಂಡ ಬಂಧಿಸಿದೆ.

2010 ಜೂನ್ 22ರಂದು ಮಂಗಳೂರು ವಿಮಾನ ನಿಲ್ದಾಣದಿಂದ ನಕಲಿ ಪಾಸ್‌ಪೋರ್ಟ್‌ನಲ್ಲಿ ವಿದೇಶಕ್ಕೆ ತೆರಳಲು ಯತ್ನಿಸಿದ್ದ ಈತನನ್ನು ಇಮಿಗ್ರೇಷನ್ ಅಧಿಕಾರಿ ಕೆ.ಎಂ. ಚಂದ್ರಶೇಖರ್ ವಶಕ್ಕೆ ಪಡೆದು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ 1 ವರ್ಷ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಆರೋಪಿ 2021ರಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರೂ, ಅರ್ಜಿಯನ್ನು ವಜಾಗೊಳಿಸಲಾಗಿತ್ತು. ತೀರ್ಪಿನ ಬಳಿಕ ಬಂಧನದಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page