ಖ್ಯಾತ ಮಲಯಾಳಂ ನಟ ಸಂತೋಷ್ ಕೆ. ನಾಯರ್ ರಸ್ತೆ ಅಪಘಾತದಲ್ಲಿ ನಿಧನ
- May 5
- 1 min read

ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದುರದೃಷ್ಟವಶಾತ್ ಮೃತಪಟ್ಟಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬಂದ ವ್ಯಾನ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂತೋಷ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಅವರ ಪತ್ನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

1982ರಲ್ಲಿ ‘ಇದ್ ಞಂಙಳುಡೆ ಕಥಾ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಸಂತೋಷ್, 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮ್ಮ ನಟನೆಯ ಮೂಲಕ ಖಳನಾಯಕ ಹಾಗೂ ಹಾಸ್ಯಪಾತ್ರಗಳಲ್ಲಿ ಜನಪ್ರಿಯರಾಗಿದ್ದ ಅವರು, ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.







Comments