;
top of page

ಅಪ್ಪನ ರೂಪದಲ್ಲಿ ಬಂದ ಕ್ರೂರಿ..! ನಾಲ್ಕು ವರ್ಷದ ಮಗಳ ಮೇಲೆ ಅಮಾನವೀಯ ಕೃತ್ಯ

Aug 7
1 min read

ಗಾಂಧೀನಗರ (ಗುಜರಾತ್): ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಗುಜರಾತ್‌ನ ಗಾಂಧೀನಗರದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಮನೆ ಬಿಟ್ಟು ತವರು ಮನೆಗೆ ತೆರಳಿದ ಕೋಪದಲ್ಲಿ ಸ್ವಂತ ನಾಲ್ಕು ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ತನ್ನ ಮನೆಯಲ್ಲಿ ವಾಸವಾಗಿದ್ದ ಪತ್ನಿಯ ಸ್ನೇಹಿತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದನು. ಆಕೆ ಒಬ್ಬಳೇ ಇದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವೂ ಕೇಳಿಬಂದಿದೆ. ಈ ವಿಚಾರ ತಿಳಿದ ಬಳಿಕ ಪತಿ-ಪತ್ನಿ ನಡುವೆ ತೀವ್ರ ಜಗಳ ನಡೆದಿದ್ದು, ಮನನೊಂದ ಪತ್ನಿ ತನ್ನ ನಾಲ್ಕು ವರ್ಷದ ಮಗಳು ಹಾಗೂ ಎರಡು ವರ್ಷದ ಮಗನನ್ನು ಕರೆದುಕೊಂಡು ತವರು ಮನೆಗೆ ತೆರಳಿದ್ದಳು.

ಕೆಲವು ದಿನಗಳ ಬಳಿಕ ಆರೋಪಿ ಪತ್ನಿಯ ಮನೆಗೆ ತೆರಳಿ, ಮಕ್ಕಳಲ್ಲಿ ಒಬ್ಬರನ್ನು ತನ್ನೊಂದಿಗೆ ಕಳುಹಿಸುವಂತೆ ಒತ್ತಾಯಿಸಿದ್ದಾನೆ. ಆರಂಭದಲ್ಲಿ ಕುಟುಂಬದವರು ವಿರೋಧಿಸಿದರೂ, ಬಳಿಕ ನಾಲ್ಕು ವರ್ಷದ ಮಗಳನ್ನು ತಂದೆಯೊಂದಿಗೆ ಕಳುಹಿಸಿದ್ದರು.

ಮನೆಗೆ ಕರೆದುಕೊಂಡು ಹೋದ ಬಳಿಕ ರಾತ್ರಿ ವೇಳೆ ಮಲಗಿದ್ದ ಬಾಲಕಿಯ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ನೋವಿನಿಂದ ಮಗು ಅಳಲು ಆರಂಭಿಸಿದಾಗ ಕೃತ್ಯವನ್ನು ನಿಲ್ಲಿಸಿದ್ದಾನೆ ಎನ್ನಲಾಗಿದೆ.

ಮರುದಿನ ಬೆಳಗ್ಗೆ ಬಾಲಕಿಗೆ ಸ್ನಾನ ಮಾಡಿಸುವ ವೇಳೆ ಸಂಬಂಧಿಕರು ರಕ್ತಸ್ರಾವವಾಗಿರುವುದನ್ನು ಗಮನಿಸಿ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಬಾಲಕಿಯನ್ನು ಗಾಂಧೀನಗರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ಅಮಾನವೀಯ ಕೃತ್ಯಕ್ಕೆ ಗಾಂಧೀನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page