ಪಂಚರಾಜ್ಯ ಚುನಾವಣೆ: ಘಟಾನುಘಟಿ ನಾಯಕರ ಸೋಲು, ರಾಜಕೀಯ ಚಿತ್ರಣ ಬದಲಿಸಿದ ಫಲಿತಾಂಶ!
- May 5
- 1 min read

ಪಂಚರಾಜ್ಯ ಚುನಾವಣಾ ಫಲಿತಾಂಶಗಳು ಅಚ್ಚರಿಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿವೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದರೆ, ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರ ಹಿಡಿದಿದೆ. ಕೇರಳದಲ್ಲಿ ಯುಡಿಎಫ್ ಗೆಲುವು ಸಾಧಿಸಿದೆ.
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಅದ್ಭುತ ಸಾಧನೆ ಮಾಡಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಡಿಎಂಕೆ ಪಾಲಿಗೆ ಈ ಚುನಾವಣೆ ಆಘಾತ ನೀಡಿದೆ.

ಘಟಾನುಘಟಿ ನಾಯಕರು ಸೋಲಿನ ರುಚಿ ಕಂಡಿದ್ದಾರೆ. ಸಿಎಂ ಎಂಕೆ ಸ್ಟಾಲಿನ್, ಮಮತಾ ಬ್ಯಾನರ್ಜಿ ಮತ್ತು ಗೌರವ್ ಗೊಗೊಯ್ ಸೇರಿದಂತೆ ಹಲವು ಪ್ರಭಾವಿ ನಾಯಕರು ಸೋಲನುಭವಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.







Comments