ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ: ಕೋಚ್ ಬಂಧನ

ಫುಟ್‌ಬಾಲ್‌ನಲ್ಲಿ ದೊಡ್ಡ ಅವಕಾಶಗಳ ಭರವಸೆ ನೀಡಿ ಅಪ್ರಾಪ್ತ ಆಟಗಾರ್ತಿ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಹಾಗೂ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಫುಟ್ಬಾಲ್ ತರಬೇತುದಾರನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಖಾಸಗಿ ಫುಟ್‌ಬಾಲ್ ತರಬೇತುದಾರ ಅಭಿಜಿತ್ ಮೆಂಡಲ್ (36) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 2023 ರಲ್ಲಿ ವಸಾಯಿಯಲ್ಲಿರುವ ತರಬೇತಿ ಅಕಾಡೆಮಿಗೆ ಸೇರಿದ್ದ 17 ವರ್ಷದ ಬಾಲಕಿಯ ನಂಬಿಕೆ ಗಳಿಸಿ ಈ ಕೃತ್ಯ ಎಸಗಿದ್ದಾನೆ.
ಆರೋಪಿಯು ಬಾಲಕಿಯ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದನು. ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.







Comments