ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ
- sathyapathanewsplu
- 2 hours ago
- 1 min read

ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೊಮ್ಮೆ ಗಗನಕ್ಕೇರಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳ ಪ್ರಭಾವದಿಂದಾಗಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 11,770 ರೂ. ಏರಿಕೆಯಾಗಿದ್ದು, ಈಗಿನ ಬೆಲೆ 1,78,850 ರೂ.ಗೆ ತಲುಪಿದೆ. ಅದೇ ರೀತಿ, ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸುವ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯೂ 10,800 ರೂ. ಏರಿಕೆಯಾಗಿ 1,63,950 ರೂ.ಗೆ ತಲುಪಿದ್ದರೆ, 18 ಕ್ಯಾರೆಟ್ ಚಿನ್ನದ ದರ 1,34,140 ರೂ.ಗೆ ಏರಿಕೆಯಾಗಿದೆ.
ಚಿನ್ನದ ಬೆಲೆಯ ಜೊತೆಜೊತೆಗೇ ಬೆಳ್ಳಿಯ ದರವೂ ಸಹ ಗಣನೀಯವಾಗಿ ಹೆಚ್ಚಳವಾಗಿದ್ದು, ಕೊಳ್ಳುವವರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಕೆಜಿ ಬೆಳ್ಳಿಯ ಬೆಲೆಯು ಏರಿಕೆ ಕಂಡಿದ್ದು, ಮಾರುಕಟ್ಟೆಯಲ್ಲಿ ಈಗ 4,10,000 ರೂ.ಗೆ ಮಾರಾಟವಾಗುತ್ತಿದೆ. ಮದುವೆ ಹಾಗೂ ಹಬ್ಬಗಳ ಸೀಸನ್ ಆರಂಭವಾಗುತ್ತಿರುವ ಹೊತ್ತಲ್ಲೇ ಈ ಮಟ್ಟದ ಬೆಲೆ ಏರಿಕೆ ಕಂಡಿರುವುದು ಮಧ್ಯಮ ವರ್ಗದ ಜನರಲ್ಲಿ ಆತಂಕ ಮೂಡಿಸಿದೆ. ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯದ ಕುಸಿತವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.






Comments