;
top of page

ಗೂನಡ್ಕ ಬಳಿ ಭೀಕರ ರಸ್ತೆ ಅಪಘಾತ: ಕಾರಿನಲ್ಲಿದ್ದ ಮಗು ಸಾವು

5 days ago
1 min read

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಎಂಬಲ್ಲಿ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಪುಟ್ಟ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೀಡಾದ ಕಾರು ಬಂಟ್ವಾಳ ತಾಲೂಕಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page