;
top of page

ಗ್ರೇಟರ್ ನೋಯ್ಡಾದಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ, 9 ಮಂದಿ ಸಜೀವ ದಹನ

Sep 24
1 min read

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಭೀಕರ ಬೆಂಕಿ ಕಾಣಿಸಿಕೊಂಡು 9 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.

ಸುಮಾರು 40 ರಿಂದ 50 ಮಂದಿ ಇದ್ದ ಈ ಬಸ್‌ನಲ್ಲಿ ಬೆಂಕಿ ವೇಗವಾಗಿ ಆವರಿಸಿದಾಗ, ಪ್ರಾಣ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆ ಜಿಗಿದಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕೂಲಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ಬಸ್‌ನೊಳಗೆ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈ ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಗೊಂಡವರಿಗೆ ತಕ್ಷಣವೇ ಸೂಕ್ತ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page