ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ

ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದಲ್ಲಿರುವ ರಾಜ್ಯದ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ 27ನೇ ಕಂತಿನ ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಿದೆ. ಹಬ್ಬದ ಖರ್ಚುಗಳ ನಡುವೆ ಈ ಹಣ ಬಂದಿರುವುದು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ದೊಡ್ಡ ಆಸರೆಯಾಗಿದೆ.

ಆದರೆ, ಕಳೆದ ಎರಡು ತಿಂಗಳ ಬಾಕಿ ಹಣದ ಬಗ್ಗೆ ಇಲಾಖೆಯು ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಬಾಕಿ ಮೊತ್ತವು ಶೀಘ್ರವೇ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆಯಲ್ಲಿ ಮಹಿಳೆಯರಿದ್ದಾರೆ. ಪ್ರಸ್ತುತ ಬಂದಿರುವ ಕಂತಿನಿಂದ ಹಬ್ಬದ ಸಡಗರ ಇಮ್ಮಡಿಯಾಗಿದ್ದು, ಹಣ ಬಂದಿರುವ ಬಗ್ಗೆ ಮೊಬೈಲ್‌ಗೆ ಸಂದೇಶಗಳು ಬರುತ್ತಿವೆ.







Comments