;
top of page

ಗೃಹಲಕ್ಷ್ಮಿ ಯೋಜನೆಗೆ 3 ವರ್ಷದ ಸಂಭ್ರಮ: 1.2 ಕೋಟಿ ಮಹಿಳೆಯರಿಗೆ ಆರ್ಥಿಕ ಬಲ ಎಂದ ಡಿಕೆ ಶಿವಕುಮಾರ್

Aug 30
1 min read

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಸ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, "ನಮ್ಮ ಸರ್ಕಾರದ ಈ ಪ್ರಮುಖ ಯೋಜನೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಅತ್ಯಂತ ಸಂತೋಷದ ಸಂಗತಿ. ರಾಜ್ಯದ 1.2 ಕೋಟಿಗೂ ಹೆಚ್ಚು ಕುಟುಂಬಗಳ ಯಜಮಾನಿಯರಿಗೆ ಈ ಯೋಜನೆ ಆರ್ಥಿಕ ಭದ್ರತೆಯ ಜೊತೆಗೆ ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನು ತಂದುಕೊಟ್ಟಿದೆ," ಎಂದು ಹೇಳಿದ್ದಾರೆ. ಗೃಹಲಕ್ಷ್ಮಿಯು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, ಬದಲಿಗೆ ಮಹಿಳೆಯರ ನೆಮ್ಮದಿಯ ಜೀವನಕ್ಕೆ ಸರ್ಕಾರ ನೀಡುತ್ತಿರುವ ಪ್ರೀತಿಯ ಆಸರೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಇದೇ ವೇಳೆ ಯೋಜನೆಯ ಫಲಾನುಭವಿಗಳಿಗೆ ವಿಶೇಷ ಮನವಿ ಮಾಡಿರುವು ಡಿ.ಕೆ. ಶಿವಕುಮಾರ್, "ಸರ್ಕಾರದ ಗ್ಯಾರಂಟಿ ಸಮಿತಿ ಸದಸ್ಯರು ನಿಮ್ಮ ಮನೆ ಬಾಗಿಲಿಗೆ ಬಂದಾಗ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಿ," ಎಂದು ಕೋರಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣವೇ ಸರ್ಕಾರದ ಮುಖ್ಯ ಗುರಿಯಾಗಿದ್ದು, ಯೋಜನೆಯ ಸುಗಮ ನಿರ್ವಹಣೆಗೆ ಫಲಾನುಭವಿಗಳ ನಿರಂತರ ಸಹಕಾರ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಕೋಟ್ಯಂತರ ಮಹಿಳೆಯರು ಪ್ರತಿ ತಿಂಗಳು ಆರ್ಥಿಕ ನೆರವು ಪಡೆಯುತ್ತಿದ್ದು, ಯೋಜನೆಯು ಯಶಸ್ವಿಯಾಗಿ ಮುನ್ನಡೆಯುತ್ತಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page