ಗುಟ್ಕಾ, ಪಾನ್ ಮಸಾಲಾ ನಿಷೇಧದ ಎಚ್ಚರಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಪಾನ್ ಮಸಾಲಾ ಮತ್ತು ಗುಟ್ಕಾಗಳಲ್ಲಿ ಅಮಲು ಪದಾರ್ಥಗಳನ್ನು ಬೆರೆಸಲಾಗುತ್ತಿದೆ ಎಂಬ ಮಾಹಿತಿ ಬರುತ್ತಿದ್ದು, ಇದು ನಿಜವಾಗಿದ್ದರೆ ರಾಜ್ಯದಲ್ಲಿ ಇವುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ಸರ್ಕಾರದ ಗುರಿಯಾಗಿದೆ. ಇಂತಹ ಕಂಪನಿಗಳಿಂದ ಬರುವ 100 ಕೋಟಿ ರೂ. ಆದಾಯ ಹೋದರೂ ಚಿಂತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾದಕ ವ್ಯಸನ ತಡೆಯುವುದು ದೊಡ್ಡ ಸವಾಲಾಗಿದ್ದು, ಯುವ ಪೀಳಿಗೆ ಇದರ ಸುಳಿಗೆ ಸಿಲುಕದಂತೆ ತಡೆಯಲು ಜನಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಸಿಎಂ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.







Comments