ಭಾರತಕ್ಕೆ ಬಿಗ್ ರಿಲೀಫ್: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಿದ ಇರಾನ್

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಭಾರತಕ್ಕೆ ಶುಭಸುದ್ದಿಯೊಂದು ಲಭಿಸಿದೆ. ಆಯಕಟ್ಟಿನ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಇರಾನ್ ಘೋಷಿಸಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಭಾರತದ ಜೊತೆಗೆ ರಷ್ಯಾ, ಚೀನಾ, ಇರಾನ್ ಮತ್ತು ಪಾಕಿಸ್ತಾನದ ಹಡಗುಗಳಿಗೂ ಮುಕ್ತ ಅವಕಾಶ ನೀಡಲಾಗಿದೆ. ಅಮೆರಿಕ ಮತ್ತು ಇಸ್ರೇಲ್ ವಿರೋಧಿ ನಿಲುವಿನ ನಡುವೆ ಇರಾನ್ ಈ ಐದು ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ರಿಯಾಯಿತಿ ನೀಡಿದೆ.
ಈ ನಿರ್ಧಾರದಿಂದಾಗಿ ಭಾರತದ ಇಂಧನ ಭದ್ರತೆಗೆ ಎದುರಾಗಿದ್ದ ಭೀತಿ ದೂರಾದಂತಾಗಿದೆ. ಜಾಗತಿಕವಾಗಿ ತೈಲ ಬೆಲೆ ಏರಿಕೆಯ ಆತಂಕವಿದ್ದರೂ, ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ಹಡಗುಗಳು ಸುರಕ್ಷಿತವಾಗಿ ಸಾಗುವುದರಿಂದ ಆರ್ಥಿಕತೆಗೆ ದೊಡ್ಡ ಮಟ್ಟದ ಬೆಂಬಲ ಸಿಗಲಿದೆ.







Comments