ಹಂಟಾ ವೈರಸ್ ಭೀತಿ
- May 7
- 1 min read

ಪಶ್ಚಿಮ ಆಫ್ರಿಕಾದ ಕರಾವಳಿಯಲ್ಲಿದ್ದ 'ಎಂವಿ ಹೊಂಡಿಯಸ್' ಕ್ರೂಸ್ ಹಡಗಿನಲ್ಲಿ ಹಂಟಾ ವೈರಸ್‌ಗೆ ತುತ್ತಾಗಿದ್ದ ಇಬ್ಬರು ಬ್ರಿಟಿಷ್ ಪ್ರಜೆಗಳು ಸುರಕ್ಷಿತವಾಗಿ ಲಂಡನ್‌ಗೆ ಮರಳಿದ್ದಾರೆ. ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರನ್ನೂ ತೀವ್ರ ನಿಗಾದಲ್ಲಿ ಇರಿಸಲಾಗಿತ್ತು.
ಪ್ರಸ್ತುತ ಈ ಇಬ್ಬರು ಪ್ರಜೆಗಳು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ ಎಂದು ಯುಕೆ ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವೈರಸ್ ಹರಡದಂತೆ ತಡೆಯಲು ಆರೋಗ್ಯ ಇಲಾಖೆಯು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಯುಕೆ ಹೆಲ್ತ್ ಸೆಕ್ಯೂರಿಟಿ ಏಜೆನ್ಸಿಯು ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ (WHO) ನಿರಂತರ ಸಂಪರ್ಕದಲ್ಲಿದ್ದು, ಹಡಗಿನಲ್ಲಿದ್ದ ಇತರ ಪ್ರಯಾಣಿಕರ ಆರೋಗ್ಯದ ಮೇಲೂ ನಿಗಾ ಇರಿಸಿದೆ. ಮಾರಕ ವೈರಸ್‌ಗಳ ಹರಡುವಿಕೆ ತಡೆಯಲು ಅಂತರಾಷ್ಟ್ರೀಯ ಮಟ್ಟದಲ್ಲಿ ಸಮನ್ವಯದೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದೆ.







Comments