ಹೆಸರಘಟ್ಟದಲ್ಲಿ ಹಕ್ಕಿ ಜ್ವರ ದೃಢ: ಬೆಂಗಳೂರಿನಲ್ಲಿ ಹೈ ಅಲರ್ಟ್

ಬೆಂಗಳೂರಿನ ಹೆಸರಘಟ್ಟದ ಸರ್ಕಾರಿ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾಗಿದ್ದು, ರಾಜ್ಯದಾದ್ಯಂತ ತೀವ್ರ ಹೈ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಂದಲೇ ರಾಜ್ಯದ ವಿವಿಧ ಭಾಗಗಳಿಗೆ ಕೋಳಿಗಳು ಸರಬರಾಜಾಗಿರುವುದು ಆತಂಕ ಮೂಡಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯ ಕೋಳಿಗಳನ್ನು ನಾಶಪಡಿಸಲು ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ.

ಸಾರ್ವಜನಿಕರು ಆತಂಕಪಡದೆ ಜಾಗರೂಕರಾಗಿರಲು ಸೂಚಿಸಲಾಗಿದೆ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಕನಿಷ್ಠ 70°C ಗಿಂತ ಹೆಚ್ಚಿನ ತಾಪಮಾನದಲ್ಲಿ ಚೆನ್ನಾಗಿ ಬೇಯಿಸಿ ಸೇವಿಸಬೇಕು. ಹಕ್ಕಿಗಳ ಅಸಹಜ ಸಾವು ಕಂಡುಬಂದಲ್ಲಿ ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸರ್ಕಾರಿ ಪ್ರಕಟಣೆ ತಿಳಿಸಿದೆ.







Comments