;
top of page

ತಲೆನೋವಿಗೆ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡ 10 ವರ್ಷದ ಬಾಲಕ

  • Mar 20
  • 1 min read

ಕಡಬ ತಾಲೂಕಿನ ರಾಮಕುಂಜದ 10 ವರ್ಷದ ಬಾಲಕನೊಬ್ಬ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧ ಸೇವಿಸಿದ ಬಳಿಕ ಮೃತಪಟ್ಟಿದ್ದಾನೆ. ಸಂಜೀವ ಪೂಜಾರಿ ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎಂದು ತಿಳಿದುಬಂದಿದೆ.

ಮಾರ್ಚ್ 18ರಂದು ಸಂಜೆ ತಲೆನೋವಿನ ಬಾಧೆಯಿಂದ ಬಾಲಕನು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದು, ತಕ್ಷಣವೇ ತೀವ್ರ ಅಸ್ವಸ್ಥಗೊಂಡು ಹೊರಳಾಡತೊಡಗಿದ್ದನು. ತಂದೆ ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು.

ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ದರೂ, ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page