;
top of page

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ; ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

Jul 25
1 min read



ನವದೆಹಲಿ, ಜು. 25: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಆದರೆ, ಈ ಕುರಿತುಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ ಕೇಂದ್ರ ಸರ್ಕಾರದಿಂದ ಇನ್ನೂ ಅಧಿಕೃತ ಆದೇಶ ಅಥವಾ ದೃಢೀಕರಣ ಹೊರಬಿದ್ದಿಲ್ಲ.


ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವ ಸ್ಥಾನ ಖಚಿತವೇ ಎಂಬ ಪ್ರಶ್ನೆಗೆ ಸದ್ಯಕ್ಕೆ ಸ್ಪಷ್ಟ ಉತ್ತರ ಇಲ್ಲ. ಕೇಂದ್ರ ಸರ್ಕಾರದ ಅಧಿಕೃತ ಪ್ರಕಟಣೆ ಹೊರಬಿದ್ದ ನಂತರವೇ ಈ ಬಗ್ಗೆ ಅಂತಿಮ ಚಿತ್ರಣ ದೊರೆಯಲಿದೆ.


ಇತ್ತೀಚಿನ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ವಿವಾದಗಳು ಹಾಗೂ ದೇಶದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳ ನಡುವೆಯೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page