ಹೆದ್ದಾರಿ 75ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ
- May 11
- 1 min read

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭಾನುವಾರ (ಮೇ 10) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ಸದಾನಂದ ಆಚಾರ್ (59) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







Comments