;
top of page

ನಿಂತಿಕಲ್ಲಿನ ಅಜಯ್ ಫೂಟ್‌ವೇರ್ ಮಾಲೀಕ ಅಜಯ್ ನಿಧನ : ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ತೆರಳಿದ್ದ ಆಸ್ಪತ್ರೆಯಲ್ಲಿ ಮೃತ್ಯು

Sep 30
1 min read

ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 25 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.


ಐವತ್ತೊಕ್ಲು ಗ್ರಾಮದ ಕಂರ್ಬು ನಿವಾಸಿಗಳಾದ ಸೀತಾರಾಮ ಗೌಡ ಮತ್ತು ಉಮಾವತಿ ದಂಪತಿಯ ಪುತ್ರ ಅಜಯ್ (25) ಮೃತ ಯುವಕ.


ಅಜಯ್ ಅವರು ಸೆಪ್ಟೆಂಬರ್ 29ರಂದು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಸ್ಪಂದಿಸದೆ ಅದೇ ರಾತ್ರಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಅಜಯ್ ಅವರು ನಿಂತಿಕಲ್ಲಿನಲ್ಲಿ ‘ಅಜಯ್ ಫೂಟ್‌ವೇರ್’ ಅಂಗಡಿ ನಡೆಸುತ್ತಿದ್ದರು. ಯುವಕನ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಮಿತ್ರರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.


ಮೃತರು ತಂದೆ-ತಾಯಿ, ಸಹೋದರಿ ಜಸ್ಮಿತಾ ದೇವಿಪ್ರಸಾದ್‌, ಸಹೋದರ ಅಕ್ಷಯ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page