ಹೊಸ ವರ್ಷಾಚರಣೆ: ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ
- sathyapathanewsplu
- Dec 31, 2025
- 1 min read

ಮಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಶಾಂತಿ, ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೊಂದಿಗೆ ಆಚರಿಸುವಂತೆ ಪೊಲೀಸ್ ಇಲಾಖೆ ಸ್ಪಷ್ಟ ಆದೇಶಗಳನ್ನು ಹೊರಡಿಸಿದೆ. ಕಾರ್ಯಕ್ರಮಗಳ ಆಯೋಜಕರು ಹಾಗೂ ಸಾರ್ವಜನಿಕರು ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮುಖ್ಯ ಸೂಚನೆಗಳು:
ಅನುಮತಿ ಇಲ್ಲದೆ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶವಿಲ್ಲ.
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಂಭ್ರಮಾಚರಣೆ ನಡೆಸಬೇಕು.
ಅತೀವೇಗ ಚಾಲನೆ, ವೀಲಿಂಗ್, ಅಸಭ್ಯ ವರ್ತನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ನಗರಾದ್ಯಂತ ಬಂದೋಬಸ್ತ್ ಕರ್ತವ್ಯ ಬಲಪಡಿಸಲಾಗಿದ್ದು, ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟ್ ಪಾಯಿಂಟ್‌ಗಳು, ಚೆಕ್ ಪೋಸ್ಟ್‌ಗಳು ಮತ್ತು ರೌಂಡ್ ಕರ್ತವ್ಯಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ, ಎಸ್‌ಎಎಫ್, ಸಿಎಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಗೆ ಕರೆ ಮಾಡಬಹುದು.
ಪೊಲೀಸ್ ನಿಯಂತ್ರಣ ಕೊಠಡಿ: 0824-2220800 / 9480802321.
ಈ ಮಾರ್ಗಸೂಚಿಗಳನ್ನು ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದಾರೆ.
ಪೊಲೀಸ್ ಇಲಾಖೆ ಸಾರ್ವಜನಿಕರ ಸಹಕಾರವನ್ನು ಕೋರಿದ್ದು, ಸುರಕ್ಷಿತ ಮತ್ತು ಸಂಯಮಿತ ಹೊಸ ವರ್ಷದ ಆಚರಣೆಗೆ ಮನವಿ ಮಾಡಿದೆ.





Comments