;
top of page

ಹುಬ್ಬಳ್ಳಿಯಲ್ಲಿ ಇಂದು 42,345 ಮನೆಗಳ ಐತಿಹಾಸಿಕ ಹಂಚಿಕೆ; ಖರ್ಗೆ–ಸಿದ್ದರಾಮಯ್ಯ–ಡಿಕೆಶಿ ಚಾಲನೆ

  • Writer: sathyapathanewsplu
    sathyapathanewsplu
  • Jan 25
  • 1 min read

ಹುಬ್ಬಳ್ಳಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಿರ್ಮಿಸಲಾದ 42,345 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡುವ ಐತಿಹಾಸಿಕ ಕಾರ್ಯಕ್ರಮ ಜ.24ರಂದು ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಾದ್ಯಂತ ನಿರ್ಮಾಣಗೊಂಡ ಮನೆಗಳ ಪೈಕಿ ಇದು ಎರಡನೇ ಹಂತದ ಹಂಚಿಕೆಯಾಗಿದ್ದು, ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದರು.

ಈ ಸಂದರ್ಭದಲ್ಲಿ 20,275 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಇದು ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ವಸತಿ ಹಂಚಿಕೆ ಕಾರ್ಯಕ್ರಮವೆಂದು ದಾಖಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page