ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೃತ್ಯ: ಯುವತಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ ಕಾಮುಕನ ಬಂಧನಕ್ಕೆ ಆಗ್ರಹ

ಹುಬ್ಬಳ್ಳಿಯಲ್ಲಿ ಮತ್ತೊಂದು ಆಘಾತಕಾರಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯನ್ನು ಪ್ರೀತಿಯ ಹೆಸರಲ್ಲಿ ನಂಬಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಆರೋಪಿಯು ಯುವತಿಯನ್ನು ಮದುವೆಯಾಗಲು ಯತ್ನಿಸಿದ್ದನಾದರೂ ಪೋಷಕರು ಇದನ್ನು ತಡೆದಿದ್ದರು. ಇದರಿಂದ ಕುಪಿತಗೊಂಡ ಆತ ಯುವತಿಯ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ.

ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಮತ್ತೆ ದೌರ್ಜನ್ಯ ಎಸಗಿದ ಮುಫೀಸ್, ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತ ಯುವತಿಯು ಇದೀಗ ಹಿಂದೂ ಸಂಘಟನೆಗಳ ಬೆಂಬಲದೊಂದಿಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯುವಕನ ಈ ಕೃತ್ಯದಿಂದ ನಗರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.







Comments