;
top of page

ಇಂದೋರ್: ಇವಿ ಕಾರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Mar 19
1 min read

ಇಂದೋರ್‌ನ ಬಂಗಾಳಿ ಚೌಕದ ವಸತಿ ಕಟ್ಟಡವೊಂದರಲ್ಲಿ ಬುಧವಾರ ಮುಂಜಾನೆ ಭೀಕರ ದುರಂತ ಸಂಭವಿಸಿದೆ. ಮನೆಯ ಮುಂದೆ ಚಾರ್ಜಿಂಗ್‌ಗೆ ಇಟ್ಟಿದ್ದ ಇಲೆಕ್ಟ್ರಿಕ್ (ಇವಿ) ಕಾರು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ವ್ಯಾಪಿಸಿದೆ. ಈ ಅವಘಡದಲ್ಲಿ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಏಳು ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ವಿಜಯ್ ಸೇಥಿಯಾ, ಸುಮನ್ ಮತ್ತು ರಾಶಿ ಸೇರಿದಂತೆ ಏಳು ಜನ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸೌರಭ್ ಮತ್ತು ಆಶಿಶ್ ಸೇರಿದಂತೆ ಮೂವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರೂ, ಅಷ್ಟರಲ್ಲೇ ದೊಡ್ಡ ಮಟ್ಟದ ಪ್ರಾಣಹಾನಿ ಸಂಭವಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page