;
top of page

ಐಬಿಪಿಎಸ್ ಆರ್‌ಆರ್‌ಬಿ ನೇಮಕಾತಿ: 13,706 ಹುದ್ದೆಗಳಿಗೆ ಅರ್ಜಿ ಆಹ್ವಾನ

Sep 1
1 min read

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 13,706 ಗ್ರೂಪ್ 'ಎ' (ಅಧಿಕಾರಿ) ಮತ್ತು ಗ್ರೂಪ್ 'ಬಿ' (ಕಚೇರಿ ಸಹಾಯಕ) ಹುದ್ದೆಗಳ ಭರ್ತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆ ಹೊರಡಿಸಿದೆ.

ಇದರಲ್ಲಿ 8,183 ಕಚೇರಿ ಸಹಾಯಕ ಹಾಗೂ 4,256 ಆಫೀಸರ್ ಸ್ಕೇಲ್-I ಹುದ್ದೆಗಳು ಪ್ರಮುಖವಾಗಿವೆ. ಯಾವುದೇ ಮಾನ್ಯತೆ ಪಡೆದ ಪದವಿ ಹೊಂದಿರುವ 18 ರಿಂದ 40 ವರ್ಷದೊಳಗಿನ (ಹುದ್ದೆಗನುಗುಣವಾಗಿ) ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ/ದಿವ್ಯಾಂಗರಿಗೆ 175 ರೂ. ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಪ್ರಿಲಿಮ್ಸ್, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 21 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page