;
top of page

ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

  • Apr 8
  • 1 min read

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಕದನ ವಿರಾಮದ ಗಡುವು ನಾಳೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಲಹೆ ನೀಡಿದೆ. ಸಂಭಾವ್ಯ ದಾಳಿಯ ಭೀತಿಯಿಂದಾಗಿ ಮುಂದಿನ 48 ಗಂಟೆಗಳ ಕಾಲ ಎಲ್ಲೂ ಓಡಾಡದೆ ಸುರಕ್ಷಿತವಾಗಿ ಮನೆಯೊಳಗೆ ಇರುವಂತೆ ಸೂಚಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಬಹುಮಹಡಿ ಕಟ್ಟಡಗಳ ಮೇಲಿನ ಅಂತಸ್ತುಗಳಲ್ಲಿ ಇರಬಾರದೆಂದು ತಿಳಿಸಲಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ರಾಯಭಾರ ಕಚೇರಿಯು ನಾಲ್ಕು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ರಾಯಭಾರ ಕಚೇರಿಯ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಪ್ರಜೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page