ಇರಾನ್‌ನಿಂದ ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ: ಕುವೈತ್, ಬಹ್ರೇನ್‌ನಲ್ಲಿ ತಲ್ಲಣ!

ಕೆಶ್ಮ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್ ಸಶಸ್ತ್ರ ಪಡೆಗಳು ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿವೆ. ಆದರೆ, ಅಮೆರಿಕ ಸೇನೆಯು ಈ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ.
ಇದೇ ವೇಳೆ ಕುವೈತ್‌ನಾದ್ಯಂತ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ತನ್ನ ವಾಯು ರಕ್ಷಣಾ ವ್ಯವಸ್ಥೆಯು ಶತ್ರುಗಳ ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಕುವೈತ್ ಸೇನೆ ತಿಳಿಸಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಅಮೆರಿಕ ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿದ ನಂತರ ಈ ಸಂಘರ್ಷ ತಾರಕಕ್ಕೇರಿದೆ.







Comments