ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಕ್ಷಿಪಣಿಗಳ ಮೇಲೆ 'ಭಾರತಕ್ಕೆ ಧನ್ಯವಾದ' ಸಂದೇಶ ವೈರಲ್

ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ ಕ್ಷಿಪಣಿ ದಾಳಿಯ ಬೆನ್ನಲ್ಲೇ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ದಾಳಿಗೆ ಬಳಸಲಾದ ಕ್ಷಿಪಣಿಗಳ ಮೇಲೆ 'ಭಾರತದ ಜನರಿಗೆ ಧನ್ಯವಾದಗಳು' ಎಂದು ಬರೆಯಲಾಗಿದ್ದು, ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಕಚೇರಿ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಹಂಚಿಕೊಂಡಿದೆ. ಭಾರತದ ಜೊತೆಗೆ ಪಾಕಿಸ್ತಾನ, ಸ್ಪೇನ್ ಮತ್ತು ಜರ್ಮನಿ ದೇಶಗಳಿಗೂ ಇರಾನ್ ಈ ಮೂಲಕ ಕೃತಜ್ಞತೆ ಸಲ್ಲಿಸಿದೆ.

ಮತ್ತೊಂದೆಡೆ, ಆರ್ಥಿಕ ಮತ್ತು ವ್ಯೂಹಾತ್ಮಕ ದೃಷ್ಟಿಯಿಂದ ಮಹತ್ವದ ಹೊರ್ಮುಜ್ ಜಲಸಂಧಿಯನ್ನು ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಐದು ರಾಷ್ಟ್ರಗಳಿಗೆ ಮುಕ್ತಗೊಳಿಸಿರುವುದಾಗಿ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ನಿ ತಿಳಿಸಿದ್ದಾರೆ. ಈ ದೇಶಗಳ ಸರಕು ಸಾಗಣೆ ಹಡಗುಗಳಿಗೆ ಸುರಕ್ಷಿತ ಹಾದಿ ಒದಗಿಸುವ ಭರವಸೆಯನ್ನು ಇರಾನ್ ನೀಡಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.







Comments