;
top of page

ಐವರ್ನಾಡು ಎಸ್‌ಸಿ ಕಾಲನಿ ರಸ್ತೆ ಅಭಿವೃದ್ಧಿಗೆ ಬಿಜೆಪಿ ಶಕ್ತಿ ಕೇಂದ್ರದ ಮನವಿ: ಅನುದಾನಕ್ಕೆ ಅಧಿಕಾರಿಗಳ ಸ್ಪಂದನೆ

9 hours ago
1 min read


ಐವರ್ನಾಡು ಎಸ್‌ಸಿ ಕಾಲನಿ ರಸ್ತೆಗಳ ದುಸ್ಥಿತಿ: ದುರಸ್ತಿಗೆ ಅನುದಾನ ನೀಡಲು ಶಿಫಾರಸು


ಸುಳ್ಯ: ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಐವರ್ನಾಡು–ನನ್ಯಡ್ಕ ಎಸ್‌ಸಿ ಕಾಲನಿ ರಸ್ತೆ ಹಾಗೂ ಐವರ್ನಾಡು–ಮುಚ್ಚಿನಡ್ಕ ಎಸ್‌ಸಿ ಕಾಲನಿ ರಸ್ತೆಗಳ ದುಸ್ಥಿತಿಯನ್ನು ಸರಿಪಡಿಸುವಂತೆ ಸುಳ್ಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.


ಮನವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಎರಡೂ ರಸ್ತೆಗಳ ಪರಿಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಗಳು ತೀರಾ ಹದಗೆಟ್ಟಿರುವುದನ್ನು ಗಮನಿಸಿದ ಅಧಿಕಾರಿಗಳು, ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವಂತೆ ಶಿಫಾರಸು ಮಾಡಲು ಕ್ರಮ ಕೈಗೊಂಡಿದ್ದಾರೆ.


ಸ್ಥಳೀಯ ನಿವಾಸಿಗಳ ಬಹುಕಾಲದ ಸಮಸ್ಯೆಯಾಗಿರುವ ಈ ರಸ್ತೆಗಳನ್ನು ಶೀಘ್ರ ದುರಸ್ತಿಗೊಳಿಸಿದರೆ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಪಾಲೆಪ್ಪಾಡಿ ವಾರ್ಡ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಸೈನಿಕ ಗಣೇಶ್ ಭಜಂತಡ್ಕ ಮಡ್ತಿಲ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಕೃಷ್ಣ ಹಾಗೂ ಪ್ರವೀಣ್ ಸೇರಿದಂತೆ ಕಾಲನಿ ನಿವಾಸಿಗಳಾದ ಪ್ರಮೋದ್, ಶಿವಪ್ರಸಾದ್, ಗುರುಪ್ರಸಾದ್, ರಮೇಶ್, ಸಂದೇಶ್, ಪ್ರೇಮ, ಸುಶೀಲ ಮತ್ತಿತರರು ಉಪಸ್ಥಿತರಿದ್ದರು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page