ಇಂದಿನಿಂದ ವಿಧಾನಸಭೆ ವಿಶೇಷ ಅಧಿವೇಶನ
- sathyapathanewsplu
- 13 hours ago
- 1 min read

ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ನಿರಾಕರಿಸಿದ್ದಾರೆ. ಹೀಗಾಗಿ ಅಧಿವೇಶನಕ್ಕೆ ಗೈರಾಗುತ್ತಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ಒಂದು ವೇಳೆ ಗೈರಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಸಿದ್ಧತೆ ಮಾಡಿದೆ.ಅಧಿವೇಶನಕ್ಕೆ ಹಾಜರಾಗಿಯೇ ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಎಂಬ ಪ್ರಶ್ನೆಮೂಡಿದೆ.





Comments