;
top of page

ಜೈಪುರದಲ್ಲಿ ಪ್ರತಿಭಟನೆ ವೇಳೆ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ

  • Jun 16
  • 1 min read

ರಾಜಸ್ಥಾನದ ಜೈಪುರದ ಶಹೀದ್ ಸ್ಮಾರಕದ ಬಳಿ ಸೋಮವಾರ ನಡೆದ ಶಾಂತಿಯುತ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರ ಮೇಲೆ ಕೆಲ ಕಿಡಿಗೇಡಿಗಳು ದೈಹಿಕ ಹಲ್ಲೆ ನಡೆಸಿದ್ದಾರೆ. ಬೆಂಬಲಿಗರ ಹೆಗಲ ಮೇಲೆ ನಿಂತು ಮಾತನಾಡಲು ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅವರ ಸ್ಕಾರ್ಫ್ ಎಳೆದು ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಿಬಿಎಸ್‌ಇ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಅಭಿಜಿತ್ ಈ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದು ಯುವಕರ ಧ್ವನಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಲ್ಲೆಯ ಬಳಿಕ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅಭಿಜಿತ್, "ದೈಹಿಕ ಹಲ್ಲೆಗಳು ಹೇಡಿತನದ ಸಂಕೇತ. ನಾನು ಗಾಂಧಿ ಮತ್ತು ಅಂಬೇಡ್ಕರ್ ಅನುಯಾಯಿಯಾಗಿದ್ದು, ಶಾಂತಿ ಮತ್ತು ಪ್ರೀತಿಯ ಮಾರ್ಗದಲ್ಲೇ ಹೋರಾಟ ಮುಂದುವರಿಸುತ್ತೇನೆ" ಎಂದು ಹೇಳುತ್ತಾ ಸಚಿವರ ರಾಜೀನಾಮೆ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page