;
top of page

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, 23 ಮಂದಿಗೆ ಗಾಯ

  • Writer: sathyapathanewsplu
    sathyapathanewsplu
  • Dec 9, 2025
  • 1 min read


ಜಪಾನ್: ಉತ್ತರ ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ನೆಲಸಮಗೊಂಡಿವೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಪೆಸಿಫಿಕ್ ಮಹಾಸಾಗರದಲ್ಲಿ ರಾತ್ರಿ 11.15 ಕ್ಕೆ ಭೂಕಂಪ ಸಂಭವಿಸಿದೆ. ಹಲವು ವಿಡಿಯೋಗಳು ವೈರಲ್ ಆಗಿವೆ.ಹಚಿನೋಹೆಯ ಹೋಟೆಲ್‌ನಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ 70 ಸೆಂ.ಮೀ.ವರೆಗಿನ ಸುನಾಮಿ ಅಲೆಗಳು ಎದ್ದಿವೆ.ಮುನ್ನೆಚ್ಚರಿಕೆಯಾಗಿ ದುರ್ಬಲ ಪ್ರದೇಶಗಳಲ್ಲಿರುವ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page