ಗೃಹಲಕ್ಷ್ಮಿ ಯೋಜನೆ: ಹಣ ಸೋರಿಕೆ ತಡೆಯಲು ‘ಜೀವಿತ ಪ್ರಮಾಣಪತ್ರ’ ಕಡ್ಡಾಯಕ್ಕೆ ಚಿಂತನೆ
- sathyapathanewsplu
- 4 days ago
- 1 min read

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಈಗ ಹೊಸ ನಿಯಮ ಜಾರಿಗೆ ಮುಂದಾಗಿದೆ. ಮರಣ ಹೊಂದಿದ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಡೆಗಟ್ಟಲು, ಇನ್ಮುಂದೆ ಫಲಾನುಭವಿಗಳು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರ ಆಲೋಚನೆ ನಡೆಸಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ನೀಡಿದ ಲಿಖಿತ ಮನವಿಯನ್ನು ಪುರಸ್ಕರಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಪ್ರತಿ ವರ್ಷ ಜೀವಿತ ಪ್ರಮಾಣಪತ್ರ ಸಲ್ಲಿಸುವ ಮಾದರಿಯನ್ನೇ ಗೃಹಲಕ್ಷ್ಮಿ ಯೋಜನೆಗೂ ಅನ್ವಯಿಸಲು ಉದ್ದೇಶಿಸಲಾಗಿದೆ. ಯೋಜನೆಯಡಿ ಸುಮಾರು 1.24 ಕೋಟಿ ಮಹಿಳೆಯರು ಲಾಭ ಪಡೆಯುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಮೃತಪಟ್ಟವರ ಹೆಸರಿನಲ್ಲಿ ಅನಗತ್ಯವಾಗಿ ಹಣ ಪಾವತಿಯಾಗುವುದನ್ನು ತಡೆದು, ಸರ್ಕಾರದ ಹಣ ದುರುಪಯೋಗವಾಗುವುದನ್ನು ನಿಲ್ಲಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಅರ್ಹ ಫಲಾನುಭವಿಗಳಿಗೆ ಮಾತ್ರ ನಿರಂತರವಾಗಿ ಯೋಜನೆಯ ಸೌಲಭ್ಯ ಸಿಗುವಂತಾಗುತ್ತದೆ.






Comments